This is the title of the web page
This is the title of the web page

Please assign a menu to the primary menu location under menu

State

ಬುಡಾ ಮಾಜಿ ಅಧ್ಯಕ್ಷ ದಮ್ಮೂರು ಶೇಖರ್ ಬಿಜೆಪಿಗೆ ರಾಜೀನಾಮೆ

ಬುಡಾ ಮಾಜಿ ಅಧ್ಯಕ್ಷ ದಮ್ಮೂರು ಶೇಖರ್ ಬಿಜೆಪಿಗೆ ರಾಜೀನಾಮೆ

ಬುಡಾ ಮಾಜಿ ಅಧ್ಯಕ್ಷ ದಮ್ಮೂರು ಶೇಖರ್ ಬಿಜೆಪಿಗೆ ರಾಜೀನಾಮೆ
ಬಳ್ಳಾರಿ,ಡಿ.27-ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಜನಾರ್ದನರೆಡ್ಡಿ ಅವರ ಬೆಂಬಲಿಗ ದಮ್ಮೂರು ಶೇಖರ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹಲವಾರು ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯಲ್ಲಿ ಸಕ್ರೀಯ ಕಾರ್ಯಕರ್ತನಾಗಿ ಹಲವಾರು ಜವಬ್ದಾರಿಗಳನ್ನು ನಿಭಾಯಿದ್ದೇನೆ. ಪಕ್ಷವನ್ನು ಕಟ್ಟುವಲ್ಲಿ ನನ್ನ ಅಳಿಲು ಸೇವೆಯನ್ನು ಸಲ್ಲಿಸಿದ್ದೇನೆ. ಇಷ್ಟು ವರ್ಷ ಭಾರತೀಯ ಜನತಾ ಪಾರ್ಟಿಯಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿದ್ದಕ್ಕಾಗಿ ಧನ್ಯವಾದ ತಿಳಿಸುವುದಾಗಿ ಅವರು ಹೇಳಿದ್ದಾರೆ.
ಇತ್ತೀಚೆಗೆ ಜನಾರ್ಧನ ರೆಡ್ಡಿ ಅವರು ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ನೋಡಿ ತುಂಬಾ ವಿಚಲಿತನಾಗಿದ್ದೇನೆ. ದಕ್ಷಿಣ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಭಾರತೀಯ ಜನತಾ ಪಾರ್ಟಿಯು ಅಧಿಕಾರ ಪಡೆಯುವಲ್ಲಿ ಹಾಗೂ ದಶಕಗಳಿಂದ ಹೋರಾಟ ನಡೆಸಿದ ಯಡಿಯೂರಪ್ಪರವರನ್ನು ಮುಖ್ಯಮಂತ್ರಿಯನ್ನಾಗಿಸಿದ ಕೀರ್ತಿ ಜನಾರ್ಧನ ರೆಡ್ಡಿ ಅವರಿಗೆ ಸಲ್ಲುತ್ತದೆ. ಜನಾರ್ಧನರೆಡ್ಡಿ ಅವರು ಪಕ್ಷಕ್ಕಾಗಿ ತಮ್ಮನ್ನು ತೊಡಗಿಸಿಕೊಂಡು, ಅದರಿಂದಾಗಿಯೇ ರೆಡ್ಡಿಯವರು ಹಾಗೂ ಅವರ ಕುಟುಂಬ ಸಾಕಷ್ಟು ಕಷ್ಟಗಳನ್ನು ಅನುಭವಿಸಿರುವ ರೀತಿಯಿಂದ ತುಂಬಾ ಮನನೊಂದಿದ್ದೇನೆ. ಜನಾರ್ಧನರೆಡ್ಡಿ ಅವರು ನನ್ನಂತಹ ಸಹಸ್ರಾರು ಕಾರ್ಯಕರ್ತರನ್ನು ಬೆಳೆಸಿ, ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳಲು ಕಾರಣೀಭೂತರಾಗಿದ್ದಾರೆ.
ಮೊಟ್ಟ ಮೊದಲಬಾರಿಗೆ ಕುರುಬ ಸಮಾಜಕ್ಕಾಗಿ ಹೋರಾಡಿ ನನ್ನನ್ನು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ) ಅದ್ಯಕ್ಷನನ್ನಾಗಿಸಿ ಸೇವೆ ಕೈಗೊಳ್ಳಲು ಅವಕಾಶ ಕಲ್ಪಿಸಿ ಕೊಟ್ಟಿದ್ದ ಜನಾರ್ಧನರೆಡ್ಡಿ ಅವರನ್ನು ಈ ಸಮಯದಲ್ಲಿ ಕೃತಜ್ಞತಾ ಭಾವದಿಂದ ಸ್ಮರಿಸುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಜನಾರ್ಧನರೆಡ್ಡಿ ಅವರನ್ನು ಪಕ್ಷ ನಡೆಸಿಕೊಂಡ ರೀತಿಯಿಂದ ತುಂಬಾ ಬೇಸರಗೊಂಡು ಹಾಗೂ ಈ ಕುರಿತು ಪಕ್ಷದ ಮೇಲಿಟ್ಟಿದ್ದ ವಿಶ್ವಾಸವನ್ನು ಕಳೆದುಕೊಂಡಿದ್ದೇನೆ. ಹಾಗಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಬಳ್ಳಾರಿ ಜಿಲ್ಲಾ ಉಪಾದ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.
——


News 9 Today

Leave a Reply