*ಮಕ್ಕಳ ಪ್ರಕರಣಗಳ ನಿರ್ವಹಣೆ ಕುರಿತಂತೆ ಒಂದು ದಿನದ ತರಬೇತಿ ಕಾರ್ಯಾಗಾರ*
ಬಳ್ಳಾರಿ,ಮಾ.(2) ಜಿಲ್ಲಾ ಮಕ್ಕಳ ಪೆÇಲೀಸ್ ವಿಶೇಷ ಘಟಕದಿಂದ ಪೆÇಲೀಸ್ ಇಲಾಖೆಯ ಮಕ್ಕಳ ಕಲ್ಯಾಣಾಧಿಕಾರಿಗಳಿಗೆ ಮಕ್ಕಳ ಪ್ರಕರಣಗಳ ನಿರ್ವಹಣೆ ಕುರಿತಂತೆ ಜಿಲ್ಲಾ ಪೆÇಲೀಸ್ ಕಚೇರಿಯ ಸಭಾಂಗಣದಲ್ಲಿ ಗುರುವಾರ ಒಂದು ದಿನದ ಸಾಮಾಥ್ರ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸತೀಶ್.ಜೆ.ಬಾಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸರ್ವೋಚ್ಚ ಹಾಗೂ ಉಚ್ಚ ನ್ಯಾಯಾಲಯದ ನಿರ್ದೇಶನಗಳನ್ನು ಚಾಚು ತಪ್ಪದೇ ಪಾಲನೆ ಮಾಡಬೇಕು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್‍ಕುಮಾರ್ ಬಂಡಾರು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಅತೀ ಸೂಕ್ಷ್ಮ ಪ್ರಕರಣಗಳಾಗಿದ್ದು, ಪ್ರಕರಣ ನಿರ್ವಹಣೆ ಮಾಡುವಲ್ಲಿ ಪೆÇಲೀಸರ ಜವಾಬ್ದಾರಿ ಅತೀ ಮುಖ್ಯವಾದುದು ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಬೆಂಗಳೂರು ಮುಖ್ಯಾಲಯದ ಪೆÇಲೀಸ್ ತರಬೇತಿದಾರರಾದ ರೊಹಿತ್.ಸಿ.ಜೆ ಅವರು, ಜಿಲ್ಲೆಯ ಎಲ್ಲಾ ಪೆÇಲೀಸ್ ಠಾಣೆಗಳ ಮಕ್ಕಳ ಕಲ್ಯಾಣ ಪೆÇಲೀಸ್ ಅಧಿಕಾರಿಗಳಿಗೆ ಹಾಗೂ ತನಿಖಾ ಸಹಾಯಕರಿಗೆ ಮಕ್ಕಳ ನ್ಯಾಯ (ಮಕ್ಕಳ ಶೋಷಣೆ ಮತ್ತು ರಕ್ಷಣೆ) ಕಾಯ್ದೆ -2015, ನಿಯಮ-2016 ಪ್ರಕರಣ ನಿರ್ವಹಣೆ ಮತ್ತು ಮಕ್ಕಳ ವಿಶೇಷ ಪೆÇಲೀಸ್ ಘಟಕದ ಕಾರ್ಯ ನಿರ್ವಹಣೆ, ಬಾಲ್ಯ ವಿವಾಹ ನಿμÉೀಧ ಕಾಯ್ದೆ 2006, ಬಾಲ್ಯ ವಿವಾಹ ನಿμÉೀಧ (ಕರ್ನಾಟಕ ತಿದ್ದುಪಡಿ) ಕಾಯ್ದೆ 2016, ಬಾಲ ಮತ್ತು ಕಿಶೋರಾವಸ್ಥೆ ಕಾರ್ಮಿಕರ ದುಡಿಮೆ (ನಿμÉೀಧ ಮತ್ತು ನಿಯಂತ್ರ) ಕಾಯ್ದೆ 1986 ತಿದ್ದುಪಡಿ ಕಾಯ್ದೆ 2016, ಲೈಂಗಿಕ ಅಪರಾಧಗಳನ್ನು ಮಕ್ಕಳ ಸಂರಕ್ಷಣಾ ಅಧಿನಿಯಮ (ಸೋಕ್ರೋ)-2012 ತಿದ್ದುಪಡಿ 2019 ನಿಯಮ 2020 ಪ್ರಕರಣ ನಿರ್ವಹಣೆ ಮಕ್ಕಳು ಕಾಣೆಯಾದ ಪ್ರಕರಣಗಳಲ್ಲಿ ಪ್ರಮಾಣಿತ ನಿರ್ವಹಣಾ ಪ್ರಕ್ರಿಯೆ ಹಾಗೂ ಮಕ್ಕಳ ಕಳ್ಳ ಸಾಗಾಣಿಕೆ ಮತ್ತು ಭಿಕ್ಷಾಟನೆ ವಿಷಯಗಳ ಕುರಿತು ಸಂಪೂರ್ಣ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಉಪವಿಭಾಗ ಪೆÇಲೀಸ್ ಉಪಾಧೀಕ್ಷಕ ಹಾಗೂ ಎಸ್.ಜೆ.ಪಿ.ಯು ಘಟಕದ ಹಿರಿಯ ಮಕ್ಕಳ ಕಲ್ಯಾಣ ಅಧಿಕಾರಿ ಬಸವರಾಜ್.ಕೆ, ಡಿ.ಎಸ್.ಪಿ ಎಸ್.ಟಿ.ಒಡೆಯರ್, ಪಿ.ಐ ಸಿದ್ದರಾಮೇಶ್ವರ ಗಡೇದ, ಗಾಂಧಿನಗರ ಪೊಲೀಸ್ ಠಾಣೆಯ ಪಿ.ಐ ಎಂ.ಎನ್.ಸಿಂಧೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್.ಕೆ.ಹೆಚ್, ಜಿಲ್ಲಾ ನಿರೂಪಣಾಧಿಕಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಕೃಷ್ಣ.ಎಂ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ವಿಜಯಲಕ್ಷ್ಮೀ ಮೈದೂರು ಸೇರಿದಂತೆ ಇತರರು ಉಪಸ್ಥಿತರಿದ್ದರು.
News 9 Today > State > ಮಕ್ಕಳ ಪ್ರಕರಣಗಳ ನಿರ್ವಹಣೆ ಕುರಿತಂತೆ ಒಂದು ದಿನದ ತರಬೇತಿ ಕಾರ್ಯಾಗಾರ
More important news
ಲಾರಿ ಮಾಲೀಕರ ಮುಷ್ಕರ
12/04/2025
ಮೀನುಗಳ ಮಾರಣ ಹೋಮ -ಕಾರಣ ನಿಗೂಢ.!?
10/04/2025
ಬಳ್ಳಾರಿ ಯಲ್ಲಿ ಉದೋಗ ಮೇಳ.
05/04/2025