*ಸಿದ್ದರಾಮಯ್ಯ ಬಳ್ಳಾರಿ ನಗರದಿಂದ ಸ್ಪರ್ಧಿಸಲಿ – ದಿವಾಕರ ಬಾಬು*
ಬಳ್ಳಾರಿ : ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಮಾಜಿ ಸಚಿವ ಎಂ.ದಿವಾಕರ ಬಾಬು ಅವರು ಒತ್ತಾಯ ಮಾಡಿದರು.
ನಗರದ ಮೀಲ್ಲರ್ ಪೇಟೆಯ ಗಂಗಪ್ಪ ಜಿನ್’ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಸಾಕಷ್ಟು ಜನರು ಆಕಾಂಕ್ಷಿಗಳಿದ್ದಾರೆ. ಆಕಾಂಕ್ಷಿಗಳಿಗೆ ಸ್ಪರ್ಧೆ ಮಾಡುವುದು ತಪ್ಪಲ್ಲ. ಆದರೆ ಬಳ್ಳಾರಿ ಜಿಲ್ಲೆಯ ಎಲ್ಲಾ ನಾಯಕರ ಜೊತೆ ಸಿದ್ದರಾಮಯ್ಯ ಅವರು ಸ್ಪರ್ಧೆ ಕುರಿತು ಚರ್ಚೆ ಮಾಡಿದ್ದೇವೆ. ಅವರ ಒಮ್ಮತ ನಿರ್ಧಾರದಿಂದ ಸಿದ್ದರಾಮಯ್ಯ ಅವರು ಸ್ಪರ್ಧಿಸಬೇಕು ಎಂದರು.
ನಾನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೊತೆ ವೈಯುಕ್ತಿಕವಾಗಿ ಮಾತನಾಡಿದ್ದೇನೆ. ಅವರು ಚುನಾವಣೆ ಹತ್ತಿರ ಬರಲಿ ಚರ್ಚೆ ಮಾಡೋಣ ಅಂದರು. ಸಿದ್ದರಾಮಯ್ಯ ಬಾದಾಮಿಯಲ್ಲಿ ಸರಿಯಾಗಿ ಅಭಿವೃದ್ಧಿ ಮಾಡಿಲ್ಲ ಎನ್ನುವುದು ಸುಳ್ಳು ಆರೋಪ, ಸಾಕಷ್ಟು ಅಭಿವೃದ್ಧಿ ಪಡಿಸಿದ್ದಾರೆ ಎಂದು ವಿವರಿಸಿದರು.
ಬಳ್ಳಾರಿ ಜಿಲ್ಲೆಯಲ್ಲಿ ಅಭಿವೃದ್ಧಿ ವಿಚಾರವಾಗಿ ಬಳ್ಳಾರಿ ಜಿಲ್ಲೆಯ ತುಂಬಾ ಹಿಂದುಳಿದೆ. ನಮ್ಮ ಬಳ್ಳಾರಿ ಜಿಲ್ಲೆ ಅಭಿವೃದ್ಧಿಯಾಗಬೇಕಾದರೆ, ಒಬ್ಬ ಪ್ರಭಾವಿ ನಾಯಕರು ಸ್ಪರ್ಧೆ ಮಾಡಿದ್ರೆ ಅಭಿವೃದ್ಧಿ ಆಗಲು ಸಾಧ್ಯವಾಗಲಿದೆ ಎಂದರು.
ಬಳ್ಳಾರಿ ನಗರದಲ್ಲಿ ಕಾಗ್ರೆಸ್’ಗೆ ನಾನು ಆಗಲಿ ಅಥವಾ ಬೇರೆಯವರಾಗಲಿ ನಿಂತರೆ ನಾನು ಕಮಗ್ರೆಸ್ ಪರವಾಗಿ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟನೆ ಕೊಟ್ಟ ದಿವಾಕರ ಬಾಬು ಅವರು ನಾನು, ಅಲ್ಲಂ ವೀರಭದ್ರಪ್ಪ, ಕೆ.ಸಿಕೊಂಡಯ್ಯ, ಸೂರ್ಯನಾರಾಯಣ ರೆಡ್ಡಿ ಜೊತೆಗೆ ಮಾತಾನಡಿದ್ದೇನೆ. ನಮಗೆ ಯಾರಿಗೆ ಟಿಕೇಟ್ ಸಿಕ್ಕರೂ ಅದು ಸಿದ್ದರಾಮಯ್ಯ ಬಂದು ಸ್ಪರ್ಧೆ ಮಾಡಬೇಕು ಎಂದು ಒತ್ತಾಯ ಮಾಡಿದರು.