ಮೈಸೂರು ಅಪಘಾತ ಪ್ರಕರಣ; ಶಾಸಕ ನಾರಾ ಭರತ್ ರೆಡ್ಡಿ ಸಂತಾಪ
ಬಳ್ಳಾರಿ, ಮೇ.30: ಮೈಸೂರಿನ ಕೊಳ್ಳೆಗಾಲದ ಬಳಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಳ್ಳಾರಿ ತಾಲೂಕಿನ ಸಂಗನಕಲ್ಲು ಗ್ರಾಮದ ಜನರು ಮೃತರಾಗಿರುವ ಸುದ್ದಿ ತಿಳಿದು ಆಘಾತವಾಗಿದೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ.
ಮಾಧ್ಯಮಗಳಲ್ಲಿ ಬಿತ್ತರಗೊಂಡ ದೃಶ್ಯ ಹಾಗೂ ಫೋಟೊಗಳು ಅಪಘಾತದ ಭೀಕರತೆಗೆ ಸಾಕ್ಷಿ. ಮೃತರ ನೋವಿನಲ್ಲಿ ನಾನೂ ಭಾಗಿಯಾಗಿರುವೆ. ಕುಟುಂಬಸ್ಥರಿಗೆ ಈ ಆಘಾತ, ನೋವು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವೆ, ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಕೋರಿ, ನನ್ನ ಸಂತಾಪ ಸಲ್ಲಿಸಿದ್ದೇನೆ ಎಂದು ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ.