ಗೃಹಜ್ಯೋತಿ ಯೋಜನೆಗೆ ಚಾಲನೆ ಕೊಟ್ಟ ಸಚಿವ ನಾಗೇಂದ್ರ
ಬಳ್ಳಾರಿ: ರಾಜ್ಯ ಸರ್ಕಾರ ಘೋಷಣೆ ಮಾಡಿದ ಐದು ಘೋಷಣೆಯಲ್ಲಿ ಗೃಹಜ್ಯೋತಿ ಯೋಜನೆಯು ಒಂದಾಗಿದ್ದು, ಈ ಯೋಜನೆಗೆ ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಇಂದು ಚಾಲನೆ ನೀಡಿದರು.
ಬಳ್ಳಾರಿ ನಗರದ ವಾಲ್ಮೀಕಿ ಭವನದಲ್ಲಿ ಶನಿವಾರ ಆಯೋಜಿಸಿದ್ದ ಗೃಹ ಜ್ಯೋತಿ ಯೋಜನೆಗೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವರು ಜೀರೋ ಬಿಲ್ ಡೆಮೋ ನೀಡುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿಸಂಡೂರು ಶಾಸಕ ಈ ತುಕಾರಾಮ್, ಜೆ.ಎನ್ ಗಣೇಶ್, ನಾರಾ ಭರತ್ ರೆಡ್ಡಿ, ಮಹಾ ಪೌರರಾದ ಡಿ. ತ್ರಿವೇಣಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮೀಶ್ರಾ, ಎಸ್ಪಿ ರಂಜೀತ್ ಕುಮಾರ್ ಬಂಡಾರು, ಸಿಇಓ ರಾಹುಲ್ ಶರಣಪ್ಪ ಸಂಕನೂರು, ಎಸಿ ಹೇಮಂತ್ ಕುಮಾರ್, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್, ಮಹಾನಗರ ಪಾಲಿಕೆ ಆಯುಕ್ತ ಎಸ್.ಎನ್.ರುದ್ರೇಶ್, ಜೆಸ್ಕಾಂನ ಅಧಿಕ್ಷಕರಾದ ವೆಂಕಟೇಶ್, ಉಪಮಹಾ ಪೌರರಾದ ಜಾನಕಮ್ಮ ಸೇರಿದಂತೆ ಪಾಲಿಕೆ ಸದಸ್ಯರು ಹಾಜರಿದ್ದರು.(ಕೆ.ಬಜಾರಪ್ಪ ವರದಿಗಾರರು ಬಳ್ಳಾರಿ.)