This is the title of the web page
This is the title of the web page

Please assign a menu to the primary menu location under menu

State

ಕನಕದಾಸರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧಾರ: 3ರಿಂದ 5 ಸಾವಿರ ಜನರ ಸೇರುವ ಗುರಿ. ಐಕ್ಯತೆ ಇದ್ದರೆ ಮಾತ್ರ ಸಾಧನೆ ಗುಂಪುಗಾರಿಕೆಯಿಂದ ಸಮಾಜಕ್ಕೆ..

ಕನಕದಾಸರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧಾರ: 3ರಿಂದ 5 ಸಾವಿರ ಜನರ ಸೇರುವ ಗುರಿ. ಐಕ್ಯತೆ ಇದ್ದರೆ ಮಾತ್ರ ಸಾಧನೆ ಗುಂಪುಗಾರಿಕೆಯಿಂದ ಸಮಾಜಕ್ಕೆ..

ಕನಕದಾಸರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧಾರ: 3ರಿಂದ 5 ಸಾವಿರ ಜನರ ಸೇರುವ ಗುರಿ. ಐಕ್ಯತೆ ಇದ್ದರೆ ಮಾತ್ರ ಸಾಧನೆ ಗುಂಪುಗಾರಿಕೆಯಿಂದ ಸಮಾಜಕ್ಕೆ..

ಬಳ್ಳಾರಿ (24)
ಕನಕದಾಸರ ಜಯಂತಿ ಅಂಗವಾಗಿ ಸಮಾಜದವರು, ವಿದ್ಯಾವಂತರು ಹಾಗೂ ಬುದ್ಧಿಜೀವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕುರುಬ ಸಮಾಜದ ಮುಖಂಡರು ಕರೆ ನೀಡಿದ್ದಾರೆ.

ಮಂಗಳವಾರ ಕುರುಬರ ಸಂಘದ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಜಯಂತಿ ಆಚರಣೆಯ ಸಿದ್ಧತೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಈ ಬಾರಿ ಕನಿಷ್ಠ 3 ಸಾವಿರದಿಂದ 5 ಸಾವಿರ ಜನರನ್ನು ಸೇರಿಸುವ ಗುರಿ ಹೊಂದಲಾಗಿದ್ದು, ಸಮಾಜದ ವಿವಿಧ ಭಾಗಗಳು, ತಾಲೂಕುಗಳು ಹಾಗೂ ಗ್ರಾಮೀಣ ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವಂತೆ ಸಂಘಟಿತ ಪ್ರಯತ್ನ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ರಾಜ್ಯದಲ್ಲಿ ಕುರುಬ ಸಮಾಜವು ದೊಡ್ಡ ಸಮಾಜವಾಗಿದ್ದು, ಸಮಾಜದ ಶಕ್ತಿ ಮತ್ತು ಒಗ್ಗಟ್ಟನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿ ಜಯಂತಿಯನ್ನು ಯಶಸ್ವಿಗೊಳಿಸಬೇಕು ಎಂದು ಮುಖಂಡರು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ವಿಗ್ರಹ ಪ್ರತಿಷ್ಠಾಪನೆ ಮಾಡುವ ವಿಚಾರವೂ ಚರ್ಚೆಗೆ ಬಂದಿದ್ದು, ಈ ಕಾರ್ಯಕ್ಕೆ ಶಾಸಕರು ಸಹ ಸಿದ್ಧರಿರುವುದಾಗಿ ತಿಳಿಸಲಾಯಿತು. ಅಲ್ಲದೆ, ಸಮಾಜದ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿ, ಅವರಿಂದ ಕನಕದಾಸರ ಜಯಂತಿ ಉತ್ಸವವನ್ನು ಅದ್ಧೂರಿಯಾಗಿ ಉದ್ಘಾಟಿಸುವ ಕುರಿತು ಚಿಂತನೆ ನಡೆಸಲಾಯಿತು.

ಸಭೆಯಲ್ಲಿ ಮಾತನಾಡಿದ ಹಿರಿಯ ಮುಖಂಡರು, ಸಂಘದ ಚೌಕಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇರಬೇಕು. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ದೊಡ್ಡದಾಗಿ ಮಾಡಿಕೊಳ್ಳದೆ ಸಮಾಜದ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು. ಮುಂಬರುವ ರಾಜಕೀಯ ಹಾಗೂ ಚುನಾವಣಾ ಸಂದರ್ಭಗಳಲ್ಲಿಯೂ ಸಮಾಜಕ್ಕೆ ಸೂಕ್ತ ಮಾರ್ಗದರ್ಶನ ದೊರೆಯುವಂತೆ ಒಗ್ಗಟ್ಟನ್ನು ಕಾಪಾಡಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು.

ಕನಕದಾಸರ ಜಯಂತಿ ದಿನ ಯಾವುದೇ ಗೊಂದಲ ಅಥವಾ ಅಡಚಣೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ, ಶಾಸಕರು ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಅತಿಥಿಗಳು ಭಾಗವಹಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಮತ್ತು ಶಿಸ್ತಿನಿಂದ ಆಯೋಜಿಸಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.

ಈ ಪೂರ್ವಭಾವಿ ಸಭೆಯಲ್ಲಿ ಸಮಾಜದ ಹಿರಿಯ ಮುಖಂಡರು, ಯುವ ಮುಖಂಡರು, ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಸಮಾಜದ ಹಲವು ಗಣ್ಯರು ಭಾಗವಹಿಸಿ ತಮ್ಮ ಸಲಹೆ-ಸೂಚನೆಗಳನ್ನು ಹಂಚಿಕೊಂಡರು.


News 9 Today

Leave a Reply