This is the title of the web page
This is the title of the web page

Please assign a menu to the primary menu location under menu

State

ಒತ್ತಡ ನಿವಾರಣೆಗೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಿ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್,ಕೆ.

ಒತ್ತಡ ನಿವಾರಣೆಗೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಿ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್,ಕೆ.

ಒತ್ತಡ ನಿವಾರಣೆಗೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಿ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್,ಕೆ.

ಬಳ್ಳಾರಿ(25)ಇಂದಿನ ದಿನಗಳಲ್ಲಿ ಕರ್ತವ್ಯದ ವೇಳೆ ದೈಹಿಕ ಮತ್ತು ಮಾನಸಿಕ ಒತ್ತಡ ಸಹಜವಾಗಿದ್ದು, ಒತ್ತಡ ನಿವಾರಣೆ ಹಾಗೂ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಯಾವುದಾದರೂ ಒಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಕ್ರೀಡೆಯಲ್ಲಿ ಕ್ರೀಡಾಸ್ಫೂರ್ತಿ ಮೆರೆಯಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಸಲಹೆ ನೀಡಿದರು.

ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ವಾರ್ಷಿಕ ಕ್ರೀಡಾಕೂಟಕ್ಕೆ ಬಲೂನ್ ಗಳನ್ನು ಹಾರಿಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಪೊಲೀಸ್ ಇಲಾಖೆಯ ಸಿಬ್ಬಂದಿ ದಿನನಿತ್ಯದ ಕರ್ತವ್ಯದ ಒತ್ತಡದ ನಡುವೆಯೂ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತ್ಯಂತ ಅಗತ್ಯ. ಸಿಬ್ಬಂದಿ ಸದೃಢ ಆರೋಗ್ಯ ಹೊಂದಿದ್ದರೆ ಮಾತ್ರ ಕರ್ತವ್ಯಗಳನ್ನು ಸಮರ್ಥವಾಗಿ ನಿರ್ವಹಿಸಲು ಸಾಧ್ಯ. ಈ ನಿಟ್ಟಿನಲ್ಲಿ ವಾರ್ಷಿಕ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದರು.

ಕ್ರೀಡೆಗಳು ಕೇವಲ ಗೆಲುವು ಮತ್ತು ಸೋಲಿಗೆ ಸೀಮಿತವಾಗಿಲ್ಲ. ಅವು ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ, ಪರಸ್ಪರ ಸಹಕಾರ ಹಾಗೂ ತಂಡದ ಮನೋಭಾವವನ್ನು ಬೆಳೆಸುತ್ತವೆ. ಕ್ರೀಡಾಕೂಟಗಳಲ್ಲಿ ಪ್ರತಿಯೊಬ್ಬರೂ ಉತ್ಸಾಹದಿಂದ ಭಾಗವಹಿಸಿ, ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ತಿಳಿಸಿದರು.

ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನಿರಂತರವಾಗಿ ಶ್ರಮಿಸುತ್ತಾರೆ. ಇಂತಹ ಕ್ರೀಡಾಕೂಟಗಳು ಸಿಬ್ಬಂದಿಯಲ್ಲಿನ ಕ್ರೀಡಾ ಪ್ರತಿಭೆಯನ್ನು ಗುರುತಿಸುವುದರ ಜತೆಗೆ ಪರಸ್ಪರ ಬಾಂಧವ್ಯ ಮತ್ತು ಒಗ್ಗಟ್ಟನ್ನು ಬಲಪಡಿಸುತ್ತವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿಅಪಾರ ಜಿಲ್ಲಾಧಿಕಾರಿಗಳು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, SP ಡಾ ಸುಮನ್ ಡಿ. ಪನ್ನೇಕರ್ , ಬಳ್ಳಾರಿ ಲೋಕಾಯುಕ್ತ SP, ಬಳ್ಳಾರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಬಸವರಾಜ ಕೆ.ಎನ್. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ನವೀನ್ ಕುಮಾರ್ ಎನ್. ಸೇರಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಕ್ರೀಡಾಕೂಟದಲ್ಲಿ ಪೊಲೀಸ್ ಇಲಾಖೆಯ ವಿವಿಧ ಘಟಕಗಳ ಅಧಿಕಾರಿ ಮತ್ತು ಸಿಬ್ಬಂದಿ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ. ಮೂರು ದಿನಗಳು ನಡೆಯುವ, ಕ್ರೀಡಾಕೂಟಕ್ಕೆ ಅದ್ದೂರಿ ಚಾಲನೆ ನೀಡಿದ್ದಾರೆ.


News 9 Today

Leave a Reply