*ಕಾಂಗ್ರೆಸ್ ಸರ್ಕಾರದ ವಕ್ಫ್ ಮಂಡಳಿ ವಿರುದ್ಧ ಬಿಜೆಪಿ ಕೂಡ್ಲಿಗಿ ಘಟಕ ವತಿಯಿಂದ ಪ್ರತಿಭಟನೆ ನೂರಾರು ಸಂಖ್ಯೆಯಲ್ಲಿ ಸೇರಿದ ಬಿಜೆಪಿ ಕಾರ್ಯಕರ್ತರು*
ಕೂಡ್ಲಿಗಿ(4)
ಶಾಂತಿ,ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ವಕ್ಸ್ ಮಂಡಳಿಯ ಮೂಲಕ ಅತ್ಯಂತ ಆತಂಕದ ಸ್ಥಿತಿಗೆ ತಳ್ಳುತ್ತಿದೆ. ಆದರಲ್ಲೂ ಕೇಂದ್ರದ ಶ್ರೀ ನರೇಂದ್ರ ಮೋದಿ ನೇತೃತ್ವದ ಸರಕಾರ ದೇಶದ ಜನತೆಯ ಹಿತದೃಷ್ಟಿಯಿಂದ ಹಾಗೂ ವಕ್ಫ್ ಮಂಡಳಿಯಲ್ಲಿ ಆಗುತ್ತಿದ್ದ ಅಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ವಕ್ಸ್ ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕ ವನ್ನು ಮಂಡಿಸಿದೆ. ಇದು ಜಂಟಿ ಪಾರ್ಲಿಮೆಂಟರಿ ಬೋರ್ಡ್ನ ಪರಿಶೀಲನೆಯಲ್ಲಿದೆ. ಈ ತಿದ್ದುಪಡಿ ಜಾರಿಯಾಗುವುದು ಬಹುತೇಕ ಖಚಿತವಾಗುತ್ತಿದ್ದಂತೆ ವಕ್ಫ್ ಬೋರ್ಡ್ ತನ್ನ ಕರಾಳ ಕೈಚಳಕವನ್ನು ಮಾಡುವ ಮೂಲಕ ಇಡೀ ದೇಶದಲ್ಲಿ ಸಾರ್ವಜನಿಕ ಆಸ್ತಿಯನ್ನು ಕಬಳಿಸುವ ಹುನ್ನಾರಕ್ಕೆ ಕೈಹಾಕಿದೆ. ಅದರಲ್ಲೂ ರಾಜ್ಯದಲ್ಲಿ ನಡೆಯುತ್ತಿರುವ ಇಂತಹ ಎಲ್ಲಾ ಕುಕೃತ್ಯಗಳಿಗೂ ಕಾಂಗ್ರೆಸ್ ಸರ್ಕಾರ ಹಾಗೂ ಸಚಿವ ಜಮೀರ್ ಅಹಮದ್ ನೇರವಾಗಿ ಕುಮ್ಮಕ್ಕು ಕೊಡುತ್ತಿರುವುದು ಇಡೀ ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿದೆ.
ರಾಜ್ಯದ ವಿಜಯಪುರ ಜಿಲ್ಲೆ ಹೊನ್ನಾವರದ ರೈತನ 1.500 ಎಕರೆ ಜಮೀನು ವಕ್ಫ್ ಆಸ್ತಿಯೆಂದು ಘೋಷಿಸಿ ತಹಸೀಲ್ದಾರ್ ರಿಂದ ಪುಷ್ಟಿ ಕರಿಸಿ ನೋಟೀಸ್ ನೀಡಲಾಗಿದೆ,ಬೆಂಗಳೂರು, ವಿಧಾನ ಸೌಧವೂ ಸೆರೀದಂತೆ ಹಲವಾರು ಪ್ರಮುಖ ಆಸ್ತಿಗಳು ವಕ್ಫ್ ಗೆ ಸೇರಿದ್ದು ಎಂದು ಮುಸ್ಲಿಂ ನಾಯಕರು ಹೇಳಿಕೆಯಿತ್ತಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ 1649 ಆಸ್ತಿಗಳ ಹಕ್ಕಿಗಾಗಿ ವಕ್ಫ್ ಪ್ರತಿಪಾದಿಸುತ್ತಿದೆ. ಸವಣೂರು ತಾಲ್ಲೂಕು ಕಡಕೋಳ ಗ್ರಾಮಪಂಚಾಯಿತಿ ವ್ಯಾಪ್ತಿಯ ಹನುಮಂತ ದೇವಸ್ಥಾನದ ಅತಿಕ್ರಮಣಕ್ಕೆ ವಕ್ಫ್ ಬೋರ್ಡ್ ಮುಂದಾಗಿದೆ. ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣ ಪಂಚಾಯಿತಿ ಕಾರ್ಯಾಲಯವೂ ವಕ್ಫ್ ಆಸ್ತಿ ಎಂದು ವಕ್ಫ್ ಹಕ್ಕು ಮಂಡಿಸಿದೆ. ಸರಕಾರಿ ಆಧೀನದಲ್ಲಿರುವ ಅಸ್ತಿಗಳನ್ನೇ ತನ್ನನೆಂದು ವಕ್ಫ್ ಬೋರ್ಡ್ ಹೇಳುತ್ತಿದೆ. ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಚಿಕ್ಕಮ್ಮ ಚಿಕ್ಕದೇವಿ ದೇಗುಲಕ್ಕೆ ಸೇರಿದ 6 ಗುಂಟೆ ಜಮೀನು ವಕ್ಫ್ ಅಸ್ತಿ ಎಂದು ನಮೂದಾಗಿದೆ. ವಿಜಯಪುರ ಜಿಲ್ಲೆಯ 1500 ವರ್ಷ ಇತಿಹಾಸವಿರುವ ಸಿಂಧಗಿಯ ವಿರಕ್ತ ಮಠವೂ ವಕ್ಫ್ ಆಸ್ತಿ ಎಂದು ದಾಖಲೆಗಳನ್ನು ಸೃಷ್ಟಿಸುತ್ತಿದ್ದಾರೆ. 2000 ವರ್ಷ ಇತಿಹಾಸವಿರುವ ಸೋಮನಾಥೇಶ್ವರ ದೇವಾಲಯವೂ ವಕ್ಫ್ ಆಸ್ತಿ ಎಂಬ ಹಕ್ಕು ಪ್ರತಿಪಾದನೆ ವಕ್ಫ್ ಮಂಡಳಿಯಿಂದ ಅನುಭವಿಸುತ್ತಿದ್ದ ರೈತರಿಗೂ ವಕ್ಫಗಆಸ್ತಿ ಎಂದು ತಹಸೀಲ್ದಾರ್ನಿಂದ ನೋಟೀಸ್ ನೀಡಲಾಗಿದೆ. ಕರ್ನಾಟಕದ ವಿಜಯಪುರ ಜಿಲ್ಲೆ ಹೊನ್ನಾವಡದ ರೈತರ 1,500 ಎಕರೆ ಜಮೀನು ಪಕ್ಷ ಆಸ್ತಿಯೆಂದು ಘೋಷಿಸಿ ತಹಸೀಲ್ದಾರ್ರಿಂದ ಪುಸ್ವೀಕರಿಸಿ ನೋಟಿಸ್ ನೀಡಿ ನಂತರ ಬಿಜೆಪಿಯ ಒತ್ತಾಯದಿಂದ ಹಿಂಪಡೆಯಲಾಗಿದೆ. ತಹಸೀರ್ಲ್ದಾರಿಂದ ಪುಷ್ಠಿಕರಿಸಿ ನೋಟೀಸ್ ನೀಡಲಾಗಿದೆ. ಬೆಂಗಳೂರಿನ ವಿಧಾನಸೌಧವೂ ಸೇರಿದಂತೆ ಹಲವಾರು ಬರುತ್ತಿದೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಪೂರ್ವಜರಿಂದ ಬಂದ ಜಮೀನುಗಳನ್ನು
ಇವು ಕೆಲವು ಉದಾಹರಣೆಗಳು ವಕ್ಸ್ ಬೊರ್ಡ್ ನಿಂದ ಆಗುತ್ತಿರುವ ಈ ರೀತಿಯ ಗೊಂದಲಗಳು ರಾಜ್ಯದಲ್ಲಿನ ಸಾಮರಸ್ಯ ಹದಗೆಡುವುದಕ್ಕೆ ಕಾರಣವಾಗಿದೆ. ಸರಕಾರದ ವಿವೇಚನೆಯಿಲ್ಲದೆ ಕೈಗೊಳ್ಳುತ್ತಿರುವ ನಿರ್ಧಾರಗಳಿಂದಾಗಿ ರಾಜ್ಯದ ಅನೇಕ ಆಸ್ತಿಗಳ ವ್ಯಾಜ್ಯ ಬೀದಿಗೆ ಬರುತ್ತಿದೆ. ಈಗಾಗಲೇ ಕಡಕೋಳದಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಪಾರಂಭವಾಗಿದೆ. ಇದು ಇಡೀ ರಾಜ್ಯವನ್ನು ವ್ಯಾಪಿಸುವ ಸಾಧ್ಯತೆಯಿದೆ. ಇಡೀ ರಾಜ್ಯದ ರೈತರ ಹಿತದೃಷ್ಟಿಯಿಂದ ತನ್ನ ನಿಲುವನ್ನು ತೆಗೆದುಕೊಳ್ಳಬೇಕಾಗಿದ್ದ ಸಿದ್ದರಾಮಯ್ಯನವರ ಕಾಂಗ್ರೆಸ್ ಸರಕಾರ ಅಲ್ಪಸಂಖ್ಯಾತರನ್ನು ಓಲೈಸುವ ದೃಷ್ಟಿಯಿಂದ ಸಂಪೂರ್ಣವಾಗಿ ಅವರ ಪರವಾಗಿ ನಿಂತಿದೆ.ಇದೇ ತೆರನಾದ ನಿಲುವುಗಳನ್ನು ಮುಂದುವರೆಸಿದಲ್ಲಿ ರಾಜ್ಯದಲ್ಲಿ ಮುಂದಾಗುವ ಅನಾಹುತಗಳಿಗೆ ಕಾಂಗ್ರೆಸ್ ಸರಕಾರವೇ ನೇರವಾಗಿ ಹೋಣೆಯಾಗಬೇಕಾಗುತ್ತದೆ. ಯಾವುದೇ ಕಾರಣಕ್ಕೂ ರಾಜ್ಯದ ಹಿತಕ್ಕೆ, ರಾಜ್ಯದ ರೈತರ ಹಿತಕ್ಕೆ ಧಕ್ಕೆಯಾಗುವಂತಹ ಯಾವುದೇ ನಿರ್ಧಾರವನ್ನು ಕಾಂಗ್ರೆಸ್ ಸರಕಾರ ಕೈಗೊಳ್ಳುವ ಮತ್ತು ವೋಟ್ ಬ್ಯಾಂಕ್ ಉಳಿಸಿಕೊಳ್ಳಲು ಮುಸ್ಲಿಂ ಪೋರೈಕೆ ಹಾಗೂ ಹಿಂದೂ ವಿರೋಧಿ ನಿರ್ಧಾರಗಳನ್ನು ಕೈಗೊಳ್ಳುವ ತನ್ನ ಹಳೇ ಚಾಳಿಯನ್ನ ಕೈಬಿಡಬೇಕೆಂದು ಬಿಜೆಪಿ ಆಗ್ರಹಿಸುತ್ತದೆ.ಸಿದ್ದ ರಾಮಯ್ಯ ನವರು ಅಧಿಕಾರಿಗಳು ಸಭೆ ನಡೆಸಿ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂಬುದನ್ನು ನಮೂದು ಮಾಡದಂತೆ
ತಾತ್ಕಾಲಿಕವಾಗಿ ತಡೆ ಹಿಡಿದಿರುವುದು ಕೇವಲ ಚುನಾವಣೆಯ ತಂತ್ರಗಾರಿಕೆಯಾಗಿದೆ. ಬಿಜೆಪಿಯು ಈ ತಂತ್ರಗಾರಿಕೆಯನ್ನು ಒಪ್ಪುವುದಿಲ್ಲ. ಮುಂದಿನ ದಿನಗಳಲ್ಲಿ ರೈತರಿಗೆ ಇದು ಮರಣ ಶಾಸನವಾಗಿಯೇ ಮುಂದುವರೆಯಲಿದೆ. ಶ್ರೀ ಸಿದ್ದರಾಮಯ್ಯನವರು ಅಧಿಕಾರಿಗಳ ಸಭೆ ನಡೆಸಿ ಪಹಣಿ ಪತ್ರದಲ್ಲಿ ವಕ್ಸ್ ಆಸ್ತಿ ಎಂಬುದಾಗಿ ನಮೂರು
ಮತ್ತದೇ ರೀತಿಯ ಕೃತ್ಯಗಳನ್ನು ಕಾಂಗ್ರೆಸ್ ನಾಯಕರು ಹಾಗೂ ಕಾಂಗ್ರೆಸ್ ಸರಕಾರ ಮುಂದುವರೆಸಿದಲ್ಲಿ ಇಡೀ ರಾಜ್ಯದಲ್ಲಿ ಜನತೆಯನ್ನು ಒಗ್ಗೂಡಿಸಿ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಈ ಮೂಲಕ ವ್ಯಕ್ತಪಡಿಸಿದರು.
ಬೇಡಿಕೆಗಳು
1. ಶ್ರೀ ಜಮೀರ್ ಅಹಮ್ಮದ್ ಅವರನ್ನು ಸಚಿವ ಸ್ಥಾನದಿಂದ ಕೂಡಲೇ ಉಚ್ಚಾಟಿಸಬೇಕು.
2. ಮಾನ್ಯ ಶ್ರೀ ಸಿದ್ದರಾಮಯ್ಯ ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು ಹಾಗೂ ಸ್ಪಷ್ಟನೆ ನೀಡಬೇಕು.
3. ಇನ್ನು ಮುಂದೆ ಯಾವುದೇ ವಕ್ಸ್ ಆದಾಲತ್ ನಡೆಸದಂತೆ ಸರ್ಕಾರಿ ಆದೇಶವನ್ನು ಹೊರಡಿಸಬೇಕು ಹಾಗೂ ಇದಕ್ಕೆ ಸಂಬಂಧಿಸಿದ ಗೇಂಟ್ ನೋಟಿಫಿಕೆಶನ್ ಅನ್ನು ಹಿಂಪಡೆಯಬೇಕು.
4: ಕೇಂದ್ರ ಸರ್ಕಾರವು ತರುತ್ತಿರುವ ವಕ್ಸ್ ತಿದ್ದುಪಡಿ ಕಾಯ್ದೆಗೆ ರಾಜ್ಯ ಸರ್ಕಾರವು ಮುಂದಿನ ಅಧಿವೇಶನದಲ್ಲಿ ಒಮ್ಮತದಿಂದ ನಿರ್ಣಯವನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಬೇಕು. ಒತ್ತಾಯ ಮಾಡಿದರು. ತಹಶಿಲ್ದಾರಗೆ ಮನವಿ ಪತ್ರ ಸಲ್ಲಿಸಿದರು. ಈಸಂದರ್ಭದಲ್ಲಿ.ಕೆ.ನಾಗರಾಜ್ ಮಂಡಲಿ ಅಧ್ಯಕ್ಷರು,ದುರಗೇಶ್ ಜಿಪಂ ಮಾಜಿ ಅಧ್ಯಕ್ಷರು ದೀನಾ ಮಂಜುನಾಥ್ ಪಕ್ಷದ ಕಾರ್ಯಕರ್ತರು ರೈತರು ಪಾಲ್ಗೊಂಡಿದ್ದರು.