This is the title of the web page
This is the title of the web page

Please assign a menu to the primary menu location under menu

State

ಐಟಿಐ ಮೈದಾನದಲ್ಲಿ ಪ್ಲಾಸ್ಟಿಕ್ ಬ್ಯಾನರ್‌ಗಳ ಅಳವಡಿಕೆ: ಕ್ರಮಕ್ಕೆ ಸಾರ್ವಜನಿಕರ ಆಗ್ರಹ. ಆಡಳಿತ ಕಣ್ಣು ಮುಚ್ಚಿ ಕೊಂಡಿದೀಯಾ!!

ಐಟಿಐ ಮೈದಾನದಲ್ಲಿ ಪ್ಲಾಸ್ಟಿಕ್ ಬ್ಯಾನರ್‌ಗಳ ಅಳವಡಿಕೆ: ಕ್ರಮಕ್ಕೆ ಸಾರ್ವಜನಿಕರ ಆಗ್ರಹ. ಆಡಳಿತ ಕಣ್ಣು ಮುಚ್ಚಿ ಕೊಂಡಿದೀಯಾ!!

ಐಟಿಐ ಮೈದಾನದಲ್ಲಿ ಪ್ಲಾಸ್ಟಿಕ್ ಬ್ಯಾನರ್‌ಗಳ ಅಳವಡಿಕೆ: ಕ್ರಮಕ್ಕೆ ಸಾರ್ವಜನಿಕರ ಆಗ್ರಹ.
ಆಡಳಿತ ಕಣ್ಣು ಮುಚ್ಚಿ ಕೊಂಡಿದೀಯಾ!!

ಬಳ್ಳಾರಿ (24): ರಾಜ್ಯ ಸರ್ಕಾರವು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಪ್ಲಾಸ್ಟಿಕ್ ಬ್ಯಾನರ್‌ಗಳ ಬಳಕೆಯನ್ನು ನಿಯಂತ್ರಿಸಲು ಹಾಗೂ ನಿಷೇಧಿಸಲು ವಿವಿಧ ಕ್ರಮಗಳನ್ನು ಕೈಗೊಂಡಿದೆ.

ಇಂತಹ ಸಂದರ್ಭದಲ್ಲಿ , ಬಳ್ಳಾರಿಯ ಐಟಿಐ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಮತ್ತು ಆರ್ಕಿಟೆಕ್ಟ್ಸ್ ಕಾರ್ಯಕ್ರಮಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಪ್ಲಾಸ್ಟಿಕ್ ಬ್ಯಾನರ್‌ಗಳನ್ನು ಅಳವಡಿಸಿರುವುದು ಸಾರ್ವಜನಿಕರ ಗಮನ ಸೆಳೆದಿದೆ.

ಸರ್ಕಾರದ ಪ್ಲಾಸ್ಟಿಕ್ ನಿಷೇಧ ಹಾಗೂ ಪರಿಸರ ಸಂರಕ್ಷಣೆಯ ನಿಯಮಗಳು ಜಾರಿಯಲ್ಲಿರುವಾಗ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ಬ್ಯಾನರ್‌ಗಳ ಬಳಕೆ ಮಾಡಿರುವುದು ನಿಯಮ ಉಲ್ಲಂಘನೆಯೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ.

ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ವಿಷಯವನ್ನು ಪರಿಶೀಲಿಸಿ, ನಿಯಮ ಉಲ್ಲಂಘನೆ ನಡೆದಿದ್ದರೆ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಅಲ್ಲದೆ, ಮುಂದಿನ ದಿನಗಳಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪರಿಸರ ಸ್ನೇಹಿ ಪರ್ಯಾಯ ವಸ್ತುಗಳನ್ನು ಬಳಸುವಂತೆ ಆಯೋಜಕರಿಗೆ ಸೂಚನೆ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಐಟಿಐ ಕಾಲೇಜು ಆವರಣದಲ್ಲಿ ನೂರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿರುವ ಹಿನ್ನೆಲೆಯಲ್ಲಿ, ಇಂತಹ ಸ್ಥಳದಲ್ಲಿ ಪ್ಲಾಸ್ಟಿಕ್ ಬ್ಯಾನರ್‌ಗಳ ಅಳವಡಿಕೆ ವಿದ್ಯಾರ್ಥಿಗಳ ಮುಂದೆ ತಪ್ಪು ಸಂದೇಶ ರವಾನಿಸುವ ಸಾಧ್ಯತೆ ಇದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಹೀಗಾಗಿ, ನಿಯಮಗಳಿಗೆ ವಿರುದ್ಧವಾಗಿ ಅಳವಡಿಸಲಾದ ಪ್ಲಾಸ್ಟಿಕ್ ಬ್ಯಾನರ್‌ಗಳನ್ನು ತೆರವುಗೊಳಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಐ ಟಿ ಐ ಕಾಲೇಜ್ ಸಮಸ್ತೆ ಇದರಬಗ್ಗೆ ಗಮನ ಹರಿಸಬೇಕು ಆಗಿದೆ ಪ್ರತಿಷ್ಠ ಕಾಲೇಜು ಗಳಲ್ಲಿ ಕಾನೂನ ನಿಯಮಗಳನ್ನು ಉಲ್ಲಂಘನೆ ಮಾಡಿದರೆ, ಸಾರ್ವಜನಿಕ ವಲಯದಲ್ಲಿ ತಪ್ಪು ಸಂದೇಶ ರವಾನೆ ಆಗುತ್ತದೆ.


News 9 Today

Leave a Reply