This is the title of the web page
This is the title of the web page

Please assign a menu to the primary menu location under menu

State

ಕನಕದಾಸ, ಒನಕೆ ಓಬ್ಬವ್ವ ಜಯಂತಿ ಆಚರಣೆ ಪೂರ್ವಭಾವಿ ಸಭೆ* *ಅದ್ದೂರಿ ಆಚರಣೆಗೆ ಕ್ರಮ: ಎಡಿಸಿ ಪಿಎಸ್ ಮಂಜುನಾಥ

ಕನಕದಾಸ, ಒನಕೆ ಓಬ್ಬವ್ವ ಜಯಂತಿ ಆಚರಣೆ ಪೂರ್ವಭಾವಿ ಸಭೆ* *ಅದ್ದೂರಿ ಆಚರಣೆಗೆ ಕ್ರಮ: ಎಡಿಸಿ ಪಿಎಸ್ ಮಂಜುನಾಥ

*ಕನಕದಾಸ, ಒನಕೆ ಓಬ್ಬವ್ವ ಜಯಂತಿ ಆಚರಣೆ ಪೂರ್ವಭಾವಿ ಸಭೆ*
*ಅದ್ದೂರಿ ಆಚರಣೆಗೆ ಕ್ರಮ: ಎಡಿಸಿ ಪಿಎಸ್ ಮಂಜುನಾಥ*
ಬಳ್ಳಾರಿ,ನ.(03)ಜಿಲ್ಲಾಡಳಿತದ ವತಿಯಿಂದ ನವೆಂಬರ್ 11ರಂದು ಕನಕದಾಸ ಜಯಂತಿ ಹಾಗೂ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಅಚ್ಚುಕಟ್ಟಾಗಿ ಆಚರಿಸಲು ಎಲ್ಲ ರೀತಿಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಪಿಎಸ್ ಮಂಜುನಾಥ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕನಕದಾಸ ಜಯಂತಿ ಹಾಗೂ ಒನಕೆ ಓಬವ್ವ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದಾಸ ಶ್ರೇಷ್ಠ ಕನಕದಾಸರು ಹಾಗೂ ವೀರವನಿತೆ ಒನಕೆ ಓಬವ್ವ ಅವರು ಸಮಾಜದ ಒಳಿತಿಗಾಗಿ ಶ್ರಮಿಸಿದವರಾಗಿದ್ದು, ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂತಹ ಮಹಾತ್ಮರ ಆಚರಣೆಗೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.
ನ.11ರಂದು ಬೆಳಗ್ಗೆ 10ಕ್ಕೆ ನಗರದ ಕುಮಾರಸ್ವಾಮಿ ದೇವಸ್ಥಾನ ಹತ್ತಿರದ ದಾಸಶ್ರೇಷ್ಠ ಕನಕದಾಸರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಕನಕದಾಸರ ಭಾವಚಿತ್ರದೊಂದಿಗೆ ಎಸ್‍ಪಿ ವೃತ್ತದಿಂದ ದುರ್ಗಮ್ಮ ಗುಡಿಯ ಮೂಲಕ ರಾಯಲ್ ವೃತ್ತದಿಂದ ರಾಘವ ಕಲಾಮಂದಿರದ ವೇದಿಕೆಯವರೆಗೆ ಮೆರವಣಿಗೆ ಜರುಗುತ್ತದೆ ಹಾಗೂ ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳನ್ನು ನಿಯೋಜಿಸಬೇಕು ಎಂದು ತಿಳಿಸಿದರು.
ವೇದಿಕೆ ಕಾರ್ಯಕ್ರಮದಲ್ಲಿ ಶ್ರೇಷ್ಠ ಕನಕದಾಸರ ಕುರಿತು ವಿಶೇಷ ಉಪನ್ಯಾಸವನ್ನು ಏರ್ಪಡಿಸಬೇಕು ಎಂದರು.
*ವೀರವನಿತೆ ಒನಕೆ ಓಬವ್ವ ಜಯಂತಿ: ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಡಾ.ರಾಜ್‍ಕುಮಾರ್ ರಸ್ತೆಯ ಸಾಂಸ್ಕøತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಆಚರಿಸಲಾಗುವುದು ಎಂದು ಇದೇ ಸಭೆಯಲ್ಲಿ ತಿಳಿಸಿದರು.
ವೀರವನಿತೆ ಒನಕೆ ಓಬವ್ವ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಸಂಜೆ 5ಕ್ಕೆ ವೇದಿಕೆ ಕಾರ್ಯಕ್ರಮ ಜರುಗುವುದು ಮತ್ತು ವಿಶೇಷ ಉಪನ್ಯಾಸ ಇರಲಿದೆ ಎಂದು ತಿಳಿಸಿದರು.
ಜಯಂತಿ ಕಾರ್ಯಕ್ರಮಗಳಲ್ಲಿ ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು ಮತ್ತು ಸಾರ್ವಜನಿಕರು ಸ್ವ-ಇಚ್ಛೆಯಿಂದ ಭಾಗವಹಿಸುವಂತೆ ಸೂಚನೆ ನೀಡಿದರು. ವಿವಿಧ ಇಲಾಖೆಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ್, ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.


News 9 Today

Leave a Reply