Web Stories
News 9 Today
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿಯಲ್ಲಿ ಪ್ರಖರ ಬಿಸಿಲು: ಅನಾವಶ್ಯಕ ಹೊರಗಡೆ ತಿರುಗಾಡದಿರಿ

ಬಳ್ಳಾರಿಯಲ್ಲಿ ಪ್ರಖರ ಬಿಸಿಲು: ಅನಾವಶ್ಯಕ ಹೊರಗಡೆ ತಿರುಗಾಡದಿರಿ
ಬಳ್ಳಾರಿ,ಮಾ.(30)
ಪ್ರಸ್ತುತ ಬೇಸಿಗೆಯಲ್ಲಿ ಜಿಲ್ಲೆಯಾದ್ಯಂತ ಮಧ್ಯಾಹ್ನ 01 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಪ್ರಖರವಾದ ಬಿಸಿಲು ಕಂಡುಬರುತ್ತಿರುವ ಹಿನ್ನಲೆಯಲ್ಲಿ ತಾಯಂದಿರು, ವಯೋವೃದ್ದರು ಮತ್ತು ಚಿಕ್ಕ ಮಕ್ಕಳು ಅನಾವಶ್ಯಕವಾಗಿ ಮನೆಯಿಂದ ಹೊರಗಡೆ ಬರದಂತೆ, ಮನೆಯಲ್ಲಿಯೇ ಇರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ವಿನಂತಿಸಿದ್ದಾರೆ.
ತುರ್ತು ಸಂದರ್ಭಗಳಲ್ಲಿ ಅಥವಾ ಮನೆಯಿಂದ ಹೊರಗಡೆ ಬರಬೇಕಾದ ಅನಿರ್ವಾಯತೆ ಇದ್ದಾಗ ನೀರಿನ ಬಾಟೆಲ್ ಹಾಗೂ ಛತ್ರಿ ಮತ್ತು ಮಕ್ಕಳಿಗೆ ಆದಷ್ಟು ತಲೆಯ ಮೇಲೆ ನೀರಿನಿಂದ ಒದ್ದೆ ಮಾಡಿದ ಬಟ್ಟೆಯನ್ನು ಹಾಕುವುದಕ್ಕೆ ಆದ್ಯತೆ ನೀಡಬೇಕು. ಆದಷ್ಟು ನೆರಳಿನಲ್ಲಿ ಇರುವಂತೆ ಗಮನ ಹರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ಇವುಗಳನ್ನು ಅನುಸರಿಸಿ:*
*ಹೆಚ್ಚು ನೀರು ಕುಡಿಯುವುದು:*
ಬಾಯಾರಿಕೆ ಇಲ್ಲದಿದರೂ ಸಹ ಹೆಚ್ಚು ನೀರನ್ನು ಆಗಾಗ ಕುಡಿಯಬೇಕು. ಬಾಯಾರಿಕೆಯು ನಿರ್ಜಲೀಕರಣದ ಲಕ್ಷಣವಾಗಿದೆ. ಪ್ರಯಾಣ ಮಾಡುವ ಸಮಯದಲ್ಲಿ ಸಹ ಕುಡಿಯುವ ನೀರನ್ನು ಜೊತೆಗೆ ತೆಗೆದುಕೊಂಡು ಹೋಗುವುದು ಅಗತ್ಯವಾಗಿದೆ. ಓಆರ್‍ಎಸ್ ಜೀವಜಲವನ್ನು ಹಾಗೂ ಮನೆಯಲ್ಲಿಯೇ ಸಿದ್ದಪಡಿಸಿದ ನಿಂಬೆ ಹಣ್ಣಿನÀ ಶರಬತ್ತು, ಮಜ್ಜಿಗೆ, ಲಸ್ಸಿ, ಹಣ್ಣಿನ ಜ್ಯೂಸ್‍ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮವಾಗಿದೆ.
ಪ್ರಸ್ತುತ ಋತುಮಾನದ ಹಣ್ಣುಗಳಾದ ಕಲ್ಲಂಗಡಿ, ಕರ್ಬೂಜ, ಕಿತ್ತಳೆ, ದ್ರಾಕ್ಷಿ ಅನಾನಸ್ ಹಾಗೂ ಸೌತೆಕಾಯಿ, ಎಳೆನೀರು ಕಾಯಿ ಹೆಚ್ಚು ಸೇವಿಸಬೇಕು. ತಿಳಿ ಬಿಳಿ ಬಣ್ಣದ ಸಡಿಲವಾದ ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ. ನಡೆಯುವಾಗ ಪಾದರಕ್ಷೆ, ಚಪ್ಪಲಿ ತಪ್ಪದೆ ಧರಿಸಬೇಕು.
*ಇವುಗಳನ್ನು ಮಾಡಬಾರದು:*
ಬಿಸಿಲಿನಲ್ಲಿ ಆದಷ್ಟು ಹೊರಹೊಗುವುದನ್ನು ತಪ್ಪಿಸಿ. ಮಧ್ಯಾಹ್ನದ ಸಂದರ್ಭದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗಬಾರದು. ಮಧ್ಯಪಾನ, ಟೀ, ಕಾಫಿ, ಹೆಚ್ಚು ಸಕ್ಕರೆ ಅಂಶವುಳ್ಳ ಪದಾರ್ಥಗಳನ್ನು ಸೇವಿಸಬೇಡಿ ಇವುಗಳ ಅತಿಯಾದ ಸೇವನೆಯಿಂದ ದೇಹ ನಿರ್ಜಲೀಕರಣಗೊಳ್ಳಬಹುದು ಅಥವಾ ಹೊಟ್ಟೆ ನೋವು ಕಂಡುಬರಬಹುದು.
ಗರ್ಭಿಣಿಯರು ಆರೋಗ್ಯ ಸಮಸ್ಯೆಯಿಂದ ಬಳಲುವವರು ಮತ್ತು ನಿಗಧಿತ ಸಮಸ್ಯೆಗಳಿಗೆ ಔಷಧಿಗಳನ್ನು ತೆಗೆದುಕೊಳ್ಳುವವರು ವೈದ್ಯರ ಸಲಹೆ ಮೇರೆಗೆ ಮನೆಯ ಹೊರಗಡೆ ಕೆಲಸ ಮಾಡಲು ಆದ್ಯತೆ ನೀಡಿ. ಬೇಸಿಗೆಯಲ್ಲಿ ಕಲುಷಿತ ನೀರಿನ ಸೇವನೆಯಿಂದ ಸಂಭಾವ್ಯ ವಾಂತಿ-ಬೇಧಿ ಪ್ರಕರಣಗಳು ಉಂಟಾಗುವ ಹಿನ್ನಲೆಯಲ್ಲಿ ಶುದ್ಧೀಕರಿಸದೇ ಇರುವ ಅಥವಾ ಕೆರೆ, ಕುಂಟೆಗಳ ನೀರನ್ನು ನೇರವಾಗಿ ಕುಡಿಯಬೇಡಿ. ರಸ್ತೆ ಬದಿ ತೆರೆದಿಟ್ಟ ಆಹಾರ ಪದಾರ್ಥ ಮತ್ತು ಕತ್ತಿರಿಸಿಟ್ಟ ಹಣ್ಣುಗಳನ್ನು ತಿನ್ನಬಾರದು.
*ಸಾಮಾನ್ಯ ಅಪಾಯದ ಚಿಹ್ನೆಗಳು:*
ವಯಸ್ಕರಲ್ಲಿ ಅರೆಪ್ರಜ್ಞಾವಸ್ಥೆ, ಪ್ರಜ್ಞೆ ತಪ್ಪುವುದು, ಸಿಡಿಮಿಡಿಗೊಳ್ಳುವುದು, ಗಾಬರಿಗೊಳ್ಳುವುದು, ಅತಿಯಾದ ತಲೆನೋವು, ಚರ್ಮವು ಬಿಸಿ ಹಾಗೂ ಕೆಂಪಾದ ಒಣಚರ್ಮ, ಆತಂಕ, ತಲೆಸುತ್ತುವಿಕೆ, ಮಾಂಸಖಂಡಗಳಲ್ಲಿ ಸುಸ್ತು ಅಥವಾ ಸೆಳೆತ, ವಾಕರಿಕೆ ಮತ್ತು ವಾಂತಿ, ಮಕ್ಕಳಲ್ಲಿ ಆಹಾರ ಸೇವಿಸಲು ನಿರಾಕರಿಸುವುದು, ಕನಿಷ್ಠ ಮೂತ್ರ ವಿಸರ್ಜನೆ, ಬಾಯಿ ಒಣಗುವಿಕೆ, ಆಲಸ್ಯ, ಮೂರ್ಛೆ ಹೋಗುವುದು, ದೇಹದ ಯಾವುದೇ ಭಾಗದಲ್ಲಿ ರಕ್ತಸ್ರಾವ ಕಂಡುಬರುತ್ತವೆ.
ರಾಷ್ಟ್ರೀಯ ಹವಮಾನ ಬದಲಾವಣೆ ಹಾಗೂ ಮಾನವ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಡಾ.ಅಬ್ದುಲ್ಲಾ ರವರ ನೇತೃತ್ವದಲ್ಲಿ ತಂಡ ರಚಿಸಿ ಕಾರ್ಯನಿರ್ವಹಿಸಲಾಗುತ್ತಿದೆ. ಅಲ್ಲದೇ ಪ್ರತಿ ದಿನ ದಿನ ಪತ್ರಿಕೆಗಳು, ರೇಡಿಯೋ, ದೂರದರ್ಶನ, ಮತ್ತು ಜಿಲ್ಲಾ ವಿಪತ್ತು ಪ್ರಾಧಿಕಾರದ ಮೂಲಕ ನೀಡುವ ಸೂಚನೆಗಳನ್ನು ತಪ್ಪದೇ ಪಾಲಿಸಬೇಕು ಎಂದು ಡಿಹೆಚ್‍ಓ ಕೋರಿದ್ದಾರೆ.
ಎಲ್ಲಾ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೇಸಿಗೆಯಲ್ಲಿ ಬರಬಹುದಾದ ರೋಗಗಳ ಆರೈಕೆಗಾಗಿ, ಓಆರ್‍ಎಸ್, ಐವಿ ಪ್ಲೂಯಿಡ್ಸ್ ಮತ್ತು ಜೀವರಕ್ಷಕ ಔಷಧಗಳ ದಾಸ್ತಾನು ಇಟ್ಟುಕೊಳ್ಳುವಂತೆ ಹಾಗೂ ಆರೋಗ್ಯಾಧಿಕಾರಿಗಳು ನೀರಿನ ಗುಣಮಟ್ಟದ ಪರೀಕ್ಷೆಯನ್ನು ನಿಯಮಿತವಾಗಿ ಮಾಡುವಂತೆ ಸೂಚನೆ ನೀಡಲಾಗಿದೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ತಿಳಿಸಿದ್ದಾರೆ.

Author
News 9 Today
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಚೇರಿ ಗಳು ವೀಕ್ಷಣೆ ಮಾಡಿದ, ಜಿಲ್ಲಾಧಿಕಾರಿ. ಬೇಸಿಗೆ,ಸಂದರ್ಭದಲ್ಲಿ ಜನರು ಕಚೇರಿಗಳು ಸುತ್ತ ಬಾರದು, ನಿರ್ಲಕ್ಷ ಮಾಡಿದರೆ,ಕ್ರಮ.ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲುಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ; ಆದರೆ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ನಾರಾ ವೈಜಯಂತಿ ರೆಡ್ಡಿ ಅಂಬೇಡ್ಕರ್ ಜಯಂತಿ ಆಚರಣೆ.ಅಂಬೇಡ್ಕರ್ ಜಯಂತಿ ಆಚರಣೆ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.