Web Stories
News 9 Today
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

26,ರಂದು,ಮುಖ್ಯಮಂತ್ರಿಗಳು,ಬಳ್ಳಾರಿ ಗೆ.ಅಪರ ಜಿಲ್ಲಾಧಿಕಾರಿ* *ಪಿ.ಎಸ್.ಮಂಜುನಾಥ

*26,ರಂದು,ಮುಖ್ಯಮಂತ್ರಿಗಳು,ಬಳ್ಳಾರಿ ಗೆ.ಅಪರ ಜಿಲ್ಲಾಧಿಕಾರಿ* *ಪಿ.ಎಸ್.ಮಂಜುನಾಥ*
ಬಳ್ಳಾರಿ,ಜೂ.(21)ಬಳ್ಳಾರಿಯಲ್ಲಿರುವ ಜಿಲ್ಲಾ ನ್ಯಾಯಾಲಯದ ಸಂಕೀರ್ಣ ಉದ್ಘಾಟನಾ ಕಾರ್ಯಕ್ರಮ ಇದೇ ಜೂ.26ರಂದು ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸಲಿದ್ದು,ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ,ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಿಸಲು ಜಿಲ್ಲಾಡಳಿತ ಉದ್ದೇಶಿಸಿದ್ದು,ಅಗತ್ಯ ಮಾಹಿತಿಯನ್ನು ತುರ್ತಾಗಿ ನಾಳೆ(ಜೂ.22)ಯೊಳಗೆ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಅವರು ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಬಳ್ಳಾರಿ ಭೇಟಿ ಹಿನ್ನೆಲೆ ನಗರದ ಜಿಲ್ಲಾಧಿಕಾರಿ ಕಚೇರಿಗಳ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಲೋಕೋಪಯೋಗಿ,ಪಂಚಾಯತ್‍ರಾಜ್ ಇಲಾಖೆ, ಕೆಆರ್‍ಐಡಿಎಲ್,ವಿಮ್ಸ್, ಮಹಾನಗರ ಪಾಲಿಕೆ,ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪೂರ್ಣಗೊಂಡ ಕಾಮಗಾರಿಗಳು ಮತ್ತು ಶಂಕುಸ್ಥಾಪನೆ ನೆರವೇರಿಸಲಿರುವ ಕಾಮಗಾರಿಗಳ ಸಂಪೂರ್ಣ ವಿವರ,ಅನುಷ್ಠಾನ ಏಜೆನ್ಸಿ ಹಾಗೂ ಅದರ ವೆಚ್ಚ ಮತ್ತು ಕಾಮಗಾರಿಯ ಉದ್ದೇಶದ ವಿವರಗಳು ಸಂಪೂರ್ಣವಾಗಿ ಸಲ್ಲಿಸಬೇಕು ಎಂದರು.
ಕೃಷಿ,ತೋಟಗಾರಿಕೆ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ವಿವಿಧ ಯೋಜನೆಗಳಡಿ ಸೌಲಭ್ಯ ಪಡೆದ ಫಲಾನುಭವಿಗಳಿಗೆ ಆದೇಶ ಪತ್ರ ವಿತರಣೆ ಮತ್ತು ಎಷ್ಟು ಜನರಿಗೆ ಸೌಲಭ್ಯ ಒದಗಿಸಲಾಗಿದೆ ಎಂಬುದರ ಸಮಗ್ರ ವಿವರ ಸಲ್ಲಿಸುವಂತೆ ಅವರು ಸೂಚಿಸಿದರು.
ಬಳ್ಳಾರಿ ಜಿಪಂ ಸಿಇಒ ಜಿ.ಲಿಂಗಮೂರ್ತಿ ಅವರು ಮುಖ್ಯಮಂತ್ರಿಗಳು ಬಜೆಟ್‍ನಲ್ಲಿ ಘೋಷಿಸಲಾದ ವಿವಿಧ ಘೋಷಣೆಗಳ ಅನುಷ್ಠಾನ ಇಲಾಖೆಗಳಲ್ಲಿ ಆಗಿದ್ದಲ್ಲಿ ಅವುಗಳ ಸಂಪೂರ್ಣ ವಿವರವನ್ನು ಸಲ್ಲಿಸಬೇಕು ಎಂದರು.
ಎಲ್ಲ ಇಲಾಖೆಗಳ ಅಧಿಕಾರಿಗಳು ತಮಗೆ ಒದಗಿಸಲಾದ ನಮೂನೆಯಲ್ಲಿ ಅಗತ್ಯ ಮಾಹಿತಿಯನ್ನು ತುರ್ತಾಗಿ ಭರ್ತಿ ಮಾಡಿ ಒದಗಿಸಬೇಕು ಮತ್ತು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಟ್ಟುಕೊಂಡಿರಬೇಕು ಎಂದರು.
ಜಿಲ್ಲಾ ನ್ಯಾಯಾಲಯದ ಉದ್ಘಾಟನೆ ಇದೇ 26ರಂದು ನಡೆಯಲಿದ್ದು, ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳು ಆಗಮಿಸಲಿದ್ದು, ಮುಖ್ಯಮಂತ್ರಿಗಳು ಸಹ ಭಾಗವಹಿಸುವ ಕುರಿತು ತಾತ್ಕಾಲಿಕ ಪ್ರವಾಸ ನಿಗದಿಯಾಗಿದೆ;ಅವರು ಬಂದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದರು.
ಇದೇ ಜೂ.25ರಂದು ಬಳ್ಳಾರಿಯಲ್ಲಿ ಅಮೃತಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮ ನಿಗದಿಯಾಗಿದ್ದು,ವಿವಿಧ ಇಲಾಖೆಗಳ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.(ಕೆ.ಬಜಾರಪ್ಪ ವರದಿಗಾರರು)

Author
News 9 Today
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಚೇರಿ ಗಳು ವೀಕ್ಷಣೆ ಮಾಡಿದ, ಜಿಲ್ಲಾಧಿಕಾರಿ. ಬೇಸಿಗೆ,ಸಂದರ್ಭದಲ್ಲಿ ಜನರು ಕಚೇರಿಗಳು ಸುತ್ತ ಬಾರದು, ನಿರ್ಲಕ್ಷ ಮಾಡಿದರೆ,ಕ್ರಮ.ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲುಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ; ಆದರೆ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ನಾರಾ ವೈಜಯಂತಿ ರೆಡ್ಡಿ ಅಂಬೇಡ್ಕರ್ ಜಯಂತಿ ಆಚರಣೆ.ಅಂಬೇಡ್ಕರ್ ಜಯಂತಿ ಆಚರಣೆ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.