This is the title of the web page
This is the title of the web page

Please assign a menu to the primary menu location under menu

State

ಬಳ್ಳಾರಿ ಜಿಲ್ಲೆಯಲ್ಲಿ ಮೊಹರಂ ಹಬ್ಬ ಆಚರಣೆ ನಿಮಿತ್ತ ಆ.08ರಿಂದ 10ರವರೆಗೆ* *ಮದ್ಯಪಾನ ಮಾರಾಟ ಮತ್ತು ಸಾಗಾಣಿಕೆ ನಿಷೇಧ ಮಾಡದ,ಡಿಸಿ ಪವನ್‍ಕುಮಾರ್ ಮಾಲಪಾಟಿ ಆದೇಶ

ಬಳ್ಳಾರಿ ಜಿಲ್ಲೆಯಲ್ಲಿ ಮೊಹರಂ ಹಬ್ಬ ಆಚರಣೆ ನಿಮಿತ್ತ ಆ.08ರಿಂದ 10ರವರೆಗೆ* *ಮದ್ಯಪಾನ ಮಾರಾಟ ಮತ್ತು ಸಾಗಾಣಿಕೆ ನಿಷೇಧ ಮಾಡದ,ಡಿಸಿ ಪವನ್‍ಕುಮಾರ್ ಮಾಲಪಾಟಿ ಆದೇಶ

*ಬಳ್ಳಾರಿ ಜಿಲ್ಲೆಯಲ್ಲಿ ಮೊಹರಂ ಹಬ್ಬ ಆಚರಣೆ ನಿಮಿತ್ತ ಆ.08ರಿಂದ 10ರವರೆಗೆ*
*ಮದ್ಯಪಾನ ಮಾರಾಟ ಮತ್ತು ಸಾಗಾಣಿಕೆ ನಿಷೇಧ ಮಾಡದ,ಡಿಸಿ ಪವನ್‍ಕುಮಾರ್ ಮಾಲಪಾಟಿ ಆದೇಶ*
ಬಳ್ಳಾರಿ,ಆ.(06) ಬಳ್ಳಾರಿ ಜಿಲ್ಲೆಯಲ್ಲಿ ಮೊಹರಂ ಹಬ್ಬ ಪ್ರಯುಕ್ತ ಜಿಲ್ಲೆಯಾದ್ಯಂತ ಆ.08ರಂದು ಬೆಳಗ್ಗೆ 06ರಿಂದ ಆ.10 ಬೆಳಗ್ಗೆ 06ರವರೆಗೆ ಮದ್ಯಮಾರಾಟ ಮತ್ತು ಸಾಗಾಣಿಕೆ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.
ಮದ್ಯಮಾರಾಟ,ಸಾಗಾಣಿಕೆ ಮಾಡದಂತೆ ಮತ್ತು ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಬಾರ್ ಮತ್ತು ರೆಸ್ಟೋರೆಂಟ್‍ಗಳನ್ನು ತೆರೆಯದಂತೆ ಸಂಪೂರ್ಣವಾಗಿ ನಿಷೇಧಿಸಿ ಆದೇಶಿಸಲಾಗಿದೆ.
ಬಳ್ಳಾರಿ ಜಿಲ್ಲಾದ್ಯಾಂತ ಜು.31ರಿಂದ ಆ.09ರವರೆಗೆ ಮೊಹರಂ ಹಬ್ಬ ಅತ್ಯಂತ ವಿಜೃಂಬಣೆಯಿಂದ ಹಿಂದೂ ಮತ್ತು ಮುಸ್ಲಿಂ ಸಹೋದರರು ಸೇರಿ ಆಚರಿಸಲಿದ್ದು, ಆ.08ರಂದು ಕತ್ತಲರಾತ್ರಿ ಮತ್ತು ಆ.09ರಂದು ಮೊಹರಂ ಹಬ್ಬ ಕೊನೆಯ ದಿನವಾಗಿರುವುದರಿಂದ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನೆರವೇರಿಸಲು ಮದ್ಯಪಾನ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಹಾಗೂ ಮದ್ಯದಂಗಡಿ, ಬಾರ್, ರೆಸ್ಟೋರೆಂಟ್‍ಗಳನ್ನು ತೆರೆಯದಂತೆ ನಿಷೇದಾಜ್ಞೆ ಹೊರಡಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕೋರಿರುತ್ತಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಲ್ಲಿಸಿರುವ ವರದಿ ಪರಿಗಣಿಸಿ ಜಿಲ್ಲೆಯಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಆದೇಶವನ್ನು ಅನುಷ್ಟಾನಕ್ಕೆ ತರಲು ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ಅಬಕಾರಿ ಉಪ ಆಯುಕ್ತರು ಮತ್ತು ಜಿಲ್ಲಾ ಪೋಲಿಸ್ ಅಧೀಕ್ಷಕರು ಕ್ರಮ ಜರುಗಿಸಬೇಕು ಎಂದು ಅವರು ತಮ್ಮ ಆದೇಶದಲ್ಲಿ ನಿರ್ದೇಶನ ನೀಡಿದ್ದಾರೆ.
ಆದರೆ ಈ ಆದೇಶವು ಡಿಸ್ಟಲರೀಸ್ ರಾಜ್ಯದ ವಿವಿಧ ಕೆ.ಎಸ್.ಪಿ.ಬಿ ಸಿ.ಎಲ್ ಡಿಪೊಗಳಿಗೆ ದಾಸ್ತಾನು ವಿಲೇವಾರಿ ಮಾಡಲು ಅನ್ವಯಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.*(ಕೆ ಬಜಾರಪ್ಪ ವರದಿಗಾರರು*)


News 9 Today

Leave a Reply